Tuesday, October 26, 2010

ನ್ಯಾಯವೇ ದೇವರು: ಆಕಾಶವೇ ಬೀಳಲಿ ಮೇಲೆ

ಚಿತ್ರ: ನ್ಯಾಯವೇ ದೇವರು
ಸಾಹಿತ್ಯ:ಚಿ.ಉದಯಶಂಕರ್
ಸಂಗೀತ:ರಾಜನ್-ನಾಗೇಂದ್ರ
ಗಾಯನ:ಪಿ .ಬಿ ಎಸ್
ನಿರ್ದೇಶನ:ಸಿದ್ದ್ದಲಿಂಗಯ್ಯ


ಆಕಾಶವೇ ಬೀಳಲಿ ಮೇಲೆ ನಾನೆಂದು ನಿನ್ನವನು
ಭೂಮಿಯೇ ಬಾಯ್ಬಿಡಲಿ ಇಲ್ಲೇ ನಾ ನಿನ್ನ ಕೈ ಬಿಡೆನು
ನೀನಿರುವುದೇ ನನಗಾಗಿ ಈ ಜೀವ ನಿನಗಾಗಿ
ಆಕಾಶವೇ ಬೀಳಲಿ ಮೇಲೆ ನಾನೆಂದು ನಿನ್ನವನು


ಹೆದರಿಕೆಯ ನೋಟವೇಕೆ,ಒಡನಾಡಿ ನಾನಿರುವೆ
ಹೊಸ ಬಾಳಿನ ಹಾದಿಯಲ್ಲಿ ,ಜೊತೆಗೂಡಿ ನಾ ಬರುವೆ
ಕಲ್ಲಿರಲಿ ಮುಳ್ಳೇ ಇರಲಿ ನಾ ಮೊದಲು ಮುನ್ನೇಡೆವೆ
ನೀ ಅಡಿಯ ಇಡುವೆಡೆಯಲ್ಲಿ ಒಲವಿನ ಹೂ ಹಾಸುವೆ
ಈ ಮಾತಿಗೆ ಮನವೇ ಸಾಕ್ಷಿ  ಈ ಭಾಷೆಗೆ ದೇವರೇ ಸಾಕ್ಷಿ
ಇನ್ನಾದರೂ ನನ್ನ ನಂಬಿ ನಗೆಯಾ ಚೆಲ್ಲು ಚೆಲುವೆ

ಆಕಾಶವೇ ಬೀಳಲಿ ಮೇಲೆ ನಾನೆಂದು ನಿನ್ನವನು
ಭೂಮಿಯೇ ಬಾಯ್ಬಿಡಲಿ ಇಲ್ಲೇ ನಾ ನಿನ್ನ ಕೈ ಬಿಡೆನು

ಹಸೆಮಣೆಯೂ ನಮಗೆ ಇಂದು ನಾವು ನಿಂತ ತಾಣವು
ತೂಗಾಡುವ ಹಸಿರೆಲೆಯೇ ಶುಭ ಕೋರುವ ತೋರಣವು
ಹಕ್ಕಿಗಳ ಚಿಲಿಪಿಲಿ ಗಾನ ಮಂಗಳಕರ ನಾದವು
ಈ ನದಿಯ ಕಲರವವೇ ಮಂತ್ರಗಳಾ ಘೋಷವು
ಸಪ್ತಪದಿ ಈ ನಡೆಯಾಯ್ತು ಸಂಜೆ ರಂಗು ಆರತಿಯಾಯ್ತು
ಇಂದೀಗ ಎರಡು ಜೀವ ಬೆರೆತು ಸ್ವರ್ಗವಾಯ್ತು

ಆಕಾಶವೇ ಬೀಳಲಿ ಮೇಲೆ ನಾನೆಂದು ನಿನ್ನವನು
ಭೂಮಿಯೇ ಬಾಯ್ಬಿಡಲಿ ಇಲ್ಲೇ ನಾ ನಿನ್ನ ಕೈ ಬಿಡೆನು
ನೀನಿರುವುದೇ ನನಗಾಗಿ ಈ ಜೀವ ನಿನಗಾಗಿ


ಕನ್ನಡ ಚಿತ್ರಗೀತೆಗಳು

2 comments:

  1. ತುಂಬಾ ಸೊಗಸಾಗಿರುವ ಸಾಹಿತ್ಯವನ್ನು ಅಂತರ್ಜಾಲ್ಲಿ ಪ್ರಕಟಿಸಿದಕ್ಕೆ ಹೃದಯಪೂರ್ವಕ ನಮನಗಳು...

    ReplyDelete
  2. ಅದ್ಬುತ ಸಾಲುಗಳು,,,,,

    ReplyDelete