Thursday, November 27, 2014

ಆಕಸ್ಮಿಕ : ನಾವಾಡುವ ನುಡಿಯೇ ಕನ್ನಡ ನುಡಿ

ಚಿತ್ರ: ಆಕಸ್ಮಿಕ 
ಸಂಗೀತ:ಹಂಸಲೇಖ 
ಸಾಹಿತ್ಯ: ಹಂಸಲೇಖ 
ನಿರ್ದೇಶನ: ಎಸ್ ನಾರಾಯಣ್ 
ಗಾಯಕರು: ರಾಜಕುಮಾರ್ 

ಆ ಆಹ ಆಹ ಆಹಹಾ .. ಓಹೊಹೋ ಓ ಹೊಹೊಹೊಹೋ
ನಾವಾಡುವ ನುಡಿಯೇ ಕನ್ನಡ ನುಡಿ ಚಿನ್ನದ ನುಡಿ ಸಿರಿಗನ್ನಡ ನುಡಿ
ನಾವಿರುವ ತಾಣವೆ ಗಂಧದ ಗುಡಿ ಅಂದದ ಗುಡಿ ಚೆಂದದ ಗುಡಿ
ನಾವಾಡುವ ನುಡಿಯೇ ಕನ್ನಡ ನುಡಿ ನಾವಿರುವ ತಾಣವೆ ಗಂಧದ ಗುಡಿ
ಅಂದದ ಗುಡಿ ಗಂಧದ ಗುಡಿ ಚೆಂದದ ಗುಡಿ ಶ್ರೀಗಂಧದ ಗುಡಿ
ಆಹಹಾ ಆಹಹಾ ಆಹಹಾ..ಆಹಹಾ ಆಹಹಾ ಆಹಹಾ

ಹಸುರಿನ ಬನಸಿರಿಗೇ ಒಲಿದು ಸೌಂದರ್ಯ ಸರಸ್ವತಿ ಧರೆಗಿಳಿದು
ಆಹಹಾ ಓ ಹೊ ಹೋ..ಆ‌ಆ ಓ ಹೋ
ಹರಿಯುವ ನದಿಯಲಿ ಈಜಾಡಿ ಹೂಬನದಲಿ ನಲಿಯುತ ಓಲಾಡಿ
ಚೆಲುವಿನ ಬಲೆಯ ಬೀಸಿದಳು ಈ ಗಂಧದ ಗುಡಿಯಲಿ ನೆಲೆಸಿದಳು
ಇದು ಯಾರ ತಪಸಿನ ಫಲವೋ ಈ ಕಂಗಳು ಮಾಡಿದ ಪುಣ್ಯವೋ ಓ ಹೊ ಹೋ..ಹಾಹ
ನಾವಾಡುವ ನುಡಿಯೇ ಕನ್ನಡ ನುಡಿ ನಾವಿರುವ ತಾಣವೆ ಗಂಧದ ಗುಡಿ
ಅಂದದ ಗುಡಿ ಗಂಧದ ಗುಡಿ ಚೆಂದದ ಗುಡಿ ಶ್ರೀಗಂಧದ ಗುಡಿ
ಆಹಹಾ ಆಹಹಾ ಓ ಹೊ ಹೋ.. ಓ ಹೊ ಹೋ ..ಓಹೋಹೋ..

ಆ ಆಹ ಆಹ ಆಹಹಾ .. ಓಹೊಹೋ ಓ ಹೊಹೊಹೊಹೋ
ನಾವಾಡುವ ನುಡಿಯೇ ಕನ್ನಡ ನುಡಿ ಚಿನ್ನದ ನುಡಿ ಸಿರಿಗನ್ನಡ ನುಡಿ
ನಾವಿರುವ ತಾಣವೆ ಗಂಧದ ಗುಡಿ ಅಂದದ ಗುಡಿ ಚೆಂದದ ಗುಡಿ
ನಾವಾಡುವ ನುಡಿಯೇ ಕನ್ನಡ ನುಡಿ ನಾವಿರುವ ತಾಣವೆ ಗಂಧದ ಗುಡಿ
ಅಂದದ ಗುಡಿ ಗಂಧದ ಗುಡಿ ಚೆಂದದ ಗುಡಿ ಶ್ರೀಗಂಧದ ಗುಡಿ
ಆಹಹಾ ಆಹಹಾ ಆಹಹಾ..ಆಹಹಾ ಆಹಹಾ ಆಹಹಾ

ಆ.. ಆಹ.. ಆಹ ಆ‌ಅ. ಆಹ.. ಹಾಹ..
ಚಿಮ್ಮುತ ಓಡಿವೆ ಜಿಂಕೆಗಳು ಕುಣಿದಾಡುತ ನಲಿದಿವೆ ನವಿಲುಗಳು
ಆಹಹಹಾ ಮುಗಿಲನು ಚುಂಬಿಸುವಾಸೆಯಲಿ
ತೂಗಾಡುತ ನಿಂತ ಮರಗಳಲಿ ಹಾಡುತಿರೆ ಬಾನಾಡಿಗಳು
ಎದೆಯಲ್ಲಿ ಸಂತಸದಾ ಹೊನಲು
ಇದು ವನ್ಯ ಮೃಗಗಳ ಲೋಕವೋ ಈ ಭೂಮಿಗೆ ಇಳಿದ ನಾಕವೋ ಆಹಹಾ.ಓಹೋ
ನಾವಾಡುವ ನುಡಿಯೇ ಕನ್ನಡ ನುಡಿ ನಾವಿರುವ ತಾಣವೆ ಗಂಧದ ಗುಡಿ
ಅಂದದ ಗುಡಿ ಗಂಧದ ಗುಡಿ ಚೆಂದದ ಗುಡಿ ಶ್ರೀಗಂಧದ ಗುಡಿ
ಆಹಹಾ ಆಹಹಾ ಓ ಹೊ 

1 comment:

  1. ಈ ಹಾಡು ಗಂಧದ ಗುಡಿ ಸಿನಿಮಾ ಹಾಡು ಸರಿಪಡಿಸಿ

    ReplyDelete